ಬೆಂಗಳೂರು, ಅ.7: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಲು ಅ.9ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಶುಲ್ಕ ಪಾವತಿಸಿದ ನಂತರ ಅಭ್ಯರ್ಥಿಗಳು ಸೀಟು ಖಾತರಿ ಚೀಟಿಯನ್ನು ಡೌನ್‌ಲೋಡ್ ಮಾಡಿಕೊಂಡು, ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.11ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅ.10ರಂದು ಸಾರ್ವತ್ರಿಕ ರಜೆ ಇರುವುದರಿಂದ ಅಭ್ಯರ್ಥಿಗಳು ಇದನ್ನು ಗಮನದಲ್ಲಿಟ್ಟುಕೊಂಡು ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಪ್ರಾಧಿಕಾರ ಸೂಚಿಸಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌ಗಳು (0)