Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಕೊಡಗು ಜಿಲ್ಲಾ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆಗೆ ಅ. 19 ಕೊನೆಯ ದಿನ

by Kodagu Varadi•ಅಕ್ಟೋಬರ್ 9, 2026BREAKING
ಕೊಡಗು ಜಿಲ್ಲಾ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆಗೆ ಅ. 19 ಕೊನೆಯ ದಿನ

ಬೆಂಗಳೂರು: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 'ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993' ಹಾಗೂ 2023ರ ನಿಯಮಗಳಡಿ ಕೊಡಗು ಜಿಲ್ಲೆಯ ವ್ಯಾಪ್ತಿಯ ತಾಲ್ಲೂಕು ಪಂಚಾಯಿತಿ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಗೆ ಆವರ್ತನೆ (ರೊಟೇಷನ್) ಆಧಾರದ ಮೇಲೆ ವರ್ಗವಾರು ಸ್ಥಾನಗಳನ್ನು ಕಾಯ್ದಿರಿಸಿ ಕರಡು ಅಧಿಸೂಚನೆ ಹೊರಡಿಸಿದ್ದು, ಈ ಹಿಂದಿನ ಎಲ್ಲಾ ಅಧಿಸೂಚನೆಗಳನ್ನು ರದ್ದುಪಡಿಸಿದೆ. ಈ ಅಧಿಸೂಚನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ 2026ರ ಅಕ್ಟೋಬರ್ 19 (ಸೋಮವಾರ) ಸಂಜೆ 5:00 ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ "ಸರ್ಕಾರದ ಕಾರ್ಯದರ್ಶಿ (ಪಂ.ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, 3ನೇ ಹಂತ, 3ನೇ ಮಹಡಿ, ಡಾ|| ಅಂಬೇಡ್ಕರ್ ವೀಧಿ, ಬೆಂಗಳೂರು-560001" ಈ ವಿಳಾಸಕ್ಕೆ ತಲುಪುವಂತೆ ಸಲ್ಲಿಸಬಹುದಾಗಿದೆ. ನಿಗದಿತ ಸಮಯದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಂಚೆ ವಿಳಂಬಕ್ಕೆ ಇಲಾಖೆ ಜವಾಬ್ದಾರಿಯಲ್ಲ ಎಂದು ತಿಳಿಸಲಾಗಿದೆ.

ಕೊಡಗು ಜಿಲ್ಲಾ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆಗೆ ಅ. 19 ಕೊನೆಯ ದಿನ image 3ಕೊಡಗು ಜಿಲ್ಲಾ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆ ಪ್ರಕಟ: ಆಕ್ಷೇಪಣೆಗೆ ಅ. 19 ಕೊನೆಯ ದಿನ image 4

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!