
ನಾಪೋಕ್ಲು: ಕ್ರೀಡಾಕೂಟಗಳು ಪ್ರತಿಯೊಬ್ಬರ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಅತ್ಯಂತ ಸಹಕಾರಿ ಕ್ರೀಡಾಕೂಟಗಳು ಪ್ರತಿಯೊಬ್ಬರ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಯಾಗಿದೆ ಎಂದು ವಿರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ ಎಸ್. ಪೊನ್ನಣ್ಣ ಅವರು ಹೇಳಿದರು. ಇಲ್ಲಿಗೆ ಸಮೀಪದ ಪಾರಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ‘ಪಾರಾಣೆ ಕ್ರೀಡಾ ಹಬ್ಬ - 2026’ ಹಾಗೂ ಅಂತರ್ ಗ್ರಾಮಾಂತರ ಕೈಲ್ ಮೂರ್ತ ಕ್ರೀಡಾಕೂಟದಲ್ಲಿ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


"ಇತ್ತೀಚಿನ ದಿನಗಳಲ್ಲಿ ಕೊಡಗಿನ ಕ್ರೀಡಾಪಟುಗಳು ದೇಶದಲ್ಲಷ್ಟೇ ಅಲ್ಲದೆ ವಿಶ್ವಮಟ್ಟದಲ್ಲೂ ಉತ್ತಮ ಹೆಸರು ಗಳಿಸುತ್ತಿದ್ದು, ಅನೇಕ ಪದಕಗಳನ್ನು ತಮ್ಮ ಮುಡಿಗೇರಿಸಿಕೊಳ್ಳುತ್ತಿದ್ದಾರೆ. ಕೊಡಗಿನ ಜನತೆ ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿಯನ್ನು ಹೊಂದಿದವರಾಗಿದ್ದು, ಕ್ರೀಡಾಪಟುಗಳು ಕ್ರೀಡೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದರೆ, ಅದು ಅವರ ಉಜ್ವಲ ಭವಿಷ್ಯವನ್ನು ರೂಪಿಸಲು ದೊಡ್ಡ ಮಟ್ಟದಲ್ಲಿ ನೆರವಾಗಲಿದೆ ಎಂದರು. ಪಾರಣೆ ಕೇಂದ್ರ ಕ್ರೀಡಾ ಮಂಡಳಿಯ ಅಧ್ಯಕ್ಷರಾದ ಎಂ. ಸಾಬ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕ್ರೀಡಾ ಮಂಡಳಿಯ ಪದಾಧಿಕಾರಿಗಳು ಸದಸ್ಯರು ಊರಿನ ಗಣ್ಯರು ಉಪಸ್ಥಿತರಿದ್ದು ವಿಜೇತರಿಗೆ ಬಹುಮಾನವನ್ನು ವಿತರಿಸಿ ಶುಭ ಹಾರೈಸಿದರು. ,✍️ವರದಿ ದುಗ್ಗಳ ಸದಾನಂದ.



ಕಾಮೆಂಟ್ಗಳು (0)