Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಬೆಂಗಳೂರಿನ ತಿಪ್ಪಸಂದ್ರದಲ್ಲಿ ಕೊಡವ ಸ್ನೇಹ ಕೂಟ ವತಿಯಿಂದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ಸನ್ಮಾನ

by Kodagu Varadi•ಅಕ್ಟೋಬರ್ 4, 2026BREAKING
ಬೆಂಗಳೂರಿನ ತಿಪ್ಪಸಂದ್ರದಲ್ಲಿ ಕೊಡವ ಸ್ನೇಹ ಕೂಟ  ವತಿಯಿಂದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ  ಸನ್ಮಾನ

ಬೆಂಗಳೂರು: ಬೆಂಗಳೂರಿನ ಕೊಡವ ಸ್ನೇಹ ಕೂಟ ತಿಪ್ಪಸಂದ್ರ, ಇವರು ಆಯೋಜಿಸಿದ್ದ 39ನೇ ಕೈಲ್ ಪೊಳ್ದ್ ನಮ್ಮೆರ ಒತ್ತೋರ್ಮೆ ಕೂಟ ಕಾರ್ಯಕ್ರಮವನ್ನು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕೊಡವ ಸಮಾಜದ ಜನಸಂಖ್ಯೆ ಕಡಿಮೆಯಾದರೂ, ದೇಶ ಸೇವೆ ಮತ್ತು ಕ್ರೀಡೆಯಲ್ಲಿನ ಸಾಧನೆ ಬಹು ದೊಡ್ಡ ಇದೆ. ಇದು ನಾವುಗಳು ಹೆಮ್ಮೆ ಪಡುವಂತ ಸಂಗತಿ ಆಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ, ಜನರಲ್ ತಿಮ್ಮಯ್ಯ ರವರ ಸಾಧನೆಯನ್ನು ನಾವು ಎಂದಿಗೂ ಮರೆಯುವಂತಿಲ್ಲ. ಇದೀಗ ಏಷ್ಯನ್ ಗೇಮ್ಸ್ ನಲ್ಲಿ ಎಂ. ಪೂವಮ್ಮ ರವರು ಚಿನ್ನದ ಪದಕ ಪಡೆಯುವ ಮೂಲಕ ಸಾಧನೆಯನ್ನು ಮಾಡಿದ್ದಾರೆ. ನಾವೆಲ್ಲರೂ ದೇಶ ಸೇವೆ ಮತ್ತು ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಿ ಮುನ್ನಡೆಯಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ಶ್ ರವಿ ನಾಣಯ್ಯ, ಖಾಜಾಂಚಿ ವಿನೋದ ಉತ್ತಪ್ಪ, ಗೌರವ ಕಾರ್ಯದರ್ಶಿ ಸುಧಾ ಸುಬ್ಬಯ್ಯ ಹಾಗೂ ಕೊಡವ ಸ್ನೇಹ ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಬೆಂಗಳೂರಿನ ತಿಪ್ಪಸಂದ್ರದಲ್ಲಿ ಕೊಡವ ಸ್ನೇಹ ಕೂಟ  ವತಿಯಿಂದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ  ಸನ್ಮಾನ image 3ಬೆಂಗಳೂರಿನ ತಿಪ್ಪಸಂದ್ರದಲ್ಲಿ ಕೊಡವ ಸ್ನೇಹ ಕೂಟ  ವತಿಯಿಂದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ  ಸನ್ಮಾನ image 4

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!