Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’

by Kodagu Varadi•ಅಕ್ಟೋಬರ್ 6, 2026BREAKING
ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’

ಭಾಗಮಂಡಲ: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ‘ಆಜ್ಞಾ ಮುಹೂರ್ತ’ ಕಾರ್ಯಕ್ರಮವು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಸಂಪ್ರದಾಯದಂತೆ ಭಗಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಮಂಗಳವಾದ್ಯಮೇಳಗಳೊಂದಿಗೆ ರವಿ ಹೆಬ್ಬಾರ್ ಅವರ ನಿವಾಸಕ್ಕೆ ತೆರಳಿ ಅಲ್ಲಿಯ ತೋಟದಿಂದ ಶಾಸ್ತ್ರೋಕ್ತವಾಗಿ ಬಾಳೆಗೊನೆ ಕಡಿಯಲಾಯಿತು. ನಂತರ ಬಾಳೆಗೊನೆಯೊಂದಿಗೆ ದೇವಾಲಯಕ್ಕೆ ಹಿಂತಿರುಗಿ ಪ್ರದಕ್ಷಿಣೆ ಬಳಿಕ ತಪ್ಪಡ್ಕ (ತಪ್ಪು ದಂಡ)’ ತೆರುವ ಧಾರ್ಮಿಕ ವಿಧಿವಿಧಾನಗಳನ್ನು ಪೂರ್ಣಗೊಳಿಸಲಾಯಿತು. ಜಾತ್ರೋತ್ಸವದ ಪವಿತ್ರತೆಯನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಸೋಮವಾರದಿಂದ ತಲಕಾವೇರಿ ಜಾತ್ರೆ ಮುಕ್ತಾಯಗೊಂಡು, ತೀರ್ಥೋದ್ಭವದ ಮರುದಿನದವರೆಗೆ ಭಾಗಮಂಡಲ ವ್ಯಾಪ್ತಿಯಲ್ಲಿ ಮದ್ಯ ಮತ್ತು ಮಾಂಸ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವನ್ನು ಭಕ್ತಾದಿಗಳು ಹಾಗೂ ಸಾರ್ವಜನಿಕರು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಯಾವುದೇ ರೀತಿಯ ವಿಘ್ನಗಳು ಸಂಭವಿಸದಿರಲೆಂದು ಪ್ರಾರ್ಥನೆ ಸಲ್ಲಿಸಿ ದೇವಾಲಯದ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ನಾಲ್ಕು ಗ್ರಾಮಗಳ ದೇವಾಲಯಗಳ ತಕ್ಕ ಮುಖ್ಯಸ್ಥರು, ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೋಡಿ ಮೋಟಯ್ಯ ಹಾಗೂ ದೇವಾಲಯದ ಆಡಳಿತಾಧಿಕಾರಿ ಚಂದ್ರಶೇಖರ್, ಸಿಬ್ಬಂದಿ ಸೇರಿದಂತೆ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಅಕ್ಟೋಬರ್ 15 (ಮಧ್ಯಾಹ್ನ 12:35): ಧನು ಲಗ್ನದಲ್ಲಿ ಅಕ್ಷಯ ಪಾತ್ರೆ'ಗೆ ಅಕ್ಕಿ ಹಾಕುವ ಕಾರ್ಯಕ್ರಮ. ಅಕ್ಟೋಬರ್ 15 (ಸಂಜೆ 06:03): ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸುವ ವಿಧಿ. ಅಕ್ಟೋಬರ್ 17 (ರಾತ್ರಿ 07:50): ಮೇಷ ಲಗ್ನದಲ್ಲಿ ಪವಿತ್ರ 'ಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ' ನೆರವೇರಲಿದೆ. ✍️ ವರದಿ: ದುಗ್ಗಳ ಸದಾನಂದ.

ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’ image 3ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’ image 4ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’ image 5ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’ image 6

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!