Join WhatsApp Group

ಕೊಡಗು ವರದಿ

KODAGU VARADI • ವಿಶ್ವಾಸಾರ್ಹ ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ
ಮುಖ್ಯಾಂಶಗಳು:
ಮುಖಪುಟ › ಜಿಲ್ಲೆ

ಭಾರಿ ಗಾಳಿ ಮಳೆಗೆ ರಸ್ತೆಗುರುಳಿದ ವಿದ್ಯುತ್ ಕಂಬ, ಮರಗಳು. ,ಗ್ರಾಮಸ್ಥರಿಂದ ಮರ ತೆರವು

by Kodagu Varadi•ಅಕ್ಟೋಬರ್ 1, 2026
ಭಾರಿ ಗಾಳಿ ಮಳೆಗೆ ರಸ್ತೆಗುರುಳಿದ ವಿದ್ಯುತ್ ಕಂಬ, ಮರಗಳು. ,ಗ್ರಾಮಸ್ಥರಿಂದ ಮರ ತೆರವು

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ರಸಲ್‌ಪುರ ಬಾಳುಗೋಡು ಗ್ರಾಮದಲ್ಲಿ ಇಂದು ಗುರುವಾರ ಸಂಜೆ ಸುರಿದ ಭಾರಿ ಗಾಳಿ ಸಹಿತ ಮಳೆಗೆ ವಿದ್ಯುತ್ ಕಂಬ ಹಾಗೂ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಗಾಳಿಯ ರಭಸಕ್ಕೆ ಕಂಬ ಮತ್ತು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೆಲಕಾಲ ಸಂಚಾರಕ್ಕೆ ಅಡಚಣೆಯಾಯಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಸ್ಥಳಕ್ಕೆ ಧಾವಿಸಿ, ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಸುರಕ್ಷತೆಯ ದೃಷ್ಟಿಯಿಂದ ಬಿದ್ದಿರುವ ವಿದ್ಯುತ್ ಕಂಬವನ್ನು ಸಂಬಂಧಪಟ್ಟ ಇಲಾಖೆ ಶೀಘ್ರ ಸರಿಪಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ✍️ ರೋಹಿತ್ ಪಾತ್ತಲೆ

ಭಾರಿ ಗಾಳಿ ಮಳೆಗೆ ರಸ್ತೆಗುರುಳಿದ ವಿದ್ಯುತ್ ಕಂಬ, ಮರಗಳು. ,ಗ್ರಾಮಸ್ಥರಿಂದ ಮರ ತೆರವು image 3ಭಾರಿ ಗಾಳಿ ಮಳೆಗೆ ರಸ್ತೆಗುರುಳಿದ ವಿದ್ಯುತ್ ಕಂಬ, ಮರಗಳು. ,ಗ್ರಾಮಸ್ಥರಿಂದ ಮರ ತೆರವು image 4

ಕಾಮೆಂಟ್‌ಗಳು (0)

ನಿಮ್ಮ ಅನಿಸಿಕೆ ತಿಳಿಸಿ (Leave a Comment)

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ ನಿಮ್ಮ ಅಭಿಪ್ರಾಯ ತಿಳಿಸಿ!