
ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಾಲುಗುಂದ ಗ್ರಾಮದ ಪಿ.ಕೆ. ತೇಜಸ್ ಅವರು ಪ್ರತಿನಿಧಿಸಿದ್ದ ಕರ್ನಾಟಕ ತಂಡ, ಅಂಡರ್-19 ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದಿದೆ. ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ ಈ ಪಂದ್ಯಾವಳಿ ನಡೆಯಿತು. ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಗಳಿಸಿ, ಚಾಂಪಿಯನ್ಶಿಪ್ ಪಡೆಯಿತು.

ತೇಜಸ್ ಅವರು ಹಾಲುಗುಂದ ಗ್ರಾಮದ ದಿವಂಗತ ಪಿ.ಸಿ. ಕಿನಿಶ್ ಹಾಗೂ ವಿಂಧ್ಯಾ ದಂಪತಿಯ ಪುತ್ರ. ಪ್ರಸ್ತುತ ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ತೇಜಸ್ ಅವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ. ವೀಣಾ ಅವರು ಆಡಳಿತ ಮಂಡಳಿ ಹಾಗೂ ಕಾಲೇಜಿನ ಪರವಾಗಿ ಅಭಿನಂದನೆ ಸಲ್ಲಿಸಿದರು. ಐಕ್ಯೂಎಸಿ ಸಂಯೋಜಕ ಎಲ್.ಆರ್. ರಾಘವೇಂದ್ರ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮುಖ್ಯಸ್ಥ ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್ಗಳು (0)